ಭಾರತ್ ಬಂದ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಓಡಾಟ ಎಂದಿನಂತೆ ಇರುತ್ತದೆ

ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜ.8 ಮತ್ತು ಜ.9 ರಂದು ಕರೆ ನೀಡಿರುವ ಭಾರತ್ ಬಂದ್ ಗೆ ಸಿಟಿ ಬಸ್ ಮತ್ತು ಇತರ ಪ್ರದೇಶಗಳಿಗೆ ತೆರಳುವ ಖಾಸಗಿ ಬಸ್ ಮಾಲಕರು ಸಭೆ ನಡೆಸಿ ಅನಾವಶ್ಯಕ ಭಾರತ್ ಬಂದ್‌ಗೆ ನಮ್ಮ ಬೆಂಬಲ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಓಡಾಟ ಎಂದಿನಂತೆ ಇರುತ್ತದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೆನರಾ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌ ತಿಳಿಸಿದ್ದಾರೆ.
ಇನ್ನು, ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಹಿನ್ನಲೆಯಲ್ಲಿ ಆ ದಿನ ಪರಿಸ್ಥಿತಿಯನ್ನು ಅವಲೋಕಿಸಿ ಮಂಗಳೂರು ಕೆಎಸ್ಆರ್ ಟಿಸಿ ವಿಭಾಗದಿಂದ ಬಸ್ ಸಂಚಾರ ಕಾರ್ಯಾಚರಿಸಲಾಗುವುದು ಎಂದು ಕೆಎಸ್ಆರ್ ಟಿಸಿ ಮಂಗಳೂರು ವಿಭಾಗಾಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.

 

--MyByndoor News--
error: Mere Bai..Copy Matt Kar..