ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಥಮ ಬಾರಿಗೆ ನಿಲುಗಡೆಯಾದ ಪೂರ್ಣಾ ಎಕ್ಸ್‌ಪ್ರೆಸ್‌ಗೆ ಸ್ವಾಗತ

ಬೈಂದೂರು: ಇದೇ ಮೊದಲ ಬಾರಿ ಬೈಂದೂರು ಮೂಕಾಂಬಿಕಾ ರೋಡ್ ರೈಲು ನಿಲ್ದಾಣದಲ್ಲಿ ನಿಲುಗಡೆ ಅವಕಾಶ ಪಡೆದ ಪುಣೆ–ಎರ್ನಾಕುಳಂ ಎಕ್ಸ್‌ಪ್ರೆಸ್‌ ರೈಲು ಭಾನುವಾರ ಇಲ್ಲಿಗೆ ಬಂದಾಗ ಸಾರ್ವಜನಿಕರು ಅದಕ್ಕೆ ಹೂಮಾಲೆ ಹಾಕಿ ಸ್ವಾಗತ ಕೋರಿದರು.ನೆರೆದಿದ್ದವರಿಗೆ ಸಹಿ ವಿತರಿಸಿ ಸಂತಸ ಹಂಚಿಕೊಂಡರು.

ಕೇಂದ್ರ ರೈಲ್ವೆ ಸಲಹಾ ಸಮಿತಿಯ ಸದಸ್ಯ ಕೆ. ವೆಂಕಟೇಶ ಕಿಣಿ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಪಡುವರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸದಾಶಿವ ಪಡುವರಿ, ಬಿಜೆಪಿ ಪ್ರಮುಖರಾದ ದೀಪಕ್‌ಕುಮಾರ ಶೆಟ್ಟಿ, ಪ್ರಿಯದರ್ಶಿನಿ ಬೆಸ್ಕೂರ್, ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಜಗದೀಶ ಪಟವಾಲ್, ಕಾರ್ಯದರ್ಶಿ ಪ್ರಕಾಶ ಬೈಂದೂರು, ಅಟೋ, ರಿಕ್ಷಾ ಚಾಲಕ ಮಾಲೀಕರ ಸಂಘದ ಪದಾಧಿಕಾರಿಗಳು ಇದ್ದರು.

ಬೈಂದೂರು ತಾಲೂಕಿನ ಜನಮನದ ಜೀವನಾಡಿ.
error: My Dear Brother, Please Dont Copy :)